ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್‍ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು(ಶನಿವಾರ) ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇನ್ನುಳಿದವರಿಗಾಗಿ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ.
ದಕ್ಷಿಣ ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ವನ್‌ಪೊರಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧದ ಜಂಟಿ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ರೈಫಲ್ಸ್, ರಾಜ್ಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಗಳು (ಸಿಆರ್‌ಪಿಎಫ್) ಭಾಗಿಯಾಗಿವೆ.
ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಮತ್ತು ಜಿಲ್ಲೆಯಲ್ಲಿ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.