
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಸೋಮವಾರ ಘೋಷಿಸಿದ್ದಾರೆ.
ದೆಹಲಿ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಹಲವು ವೈದ್ಯರನ್ನು ಬಂಧಿಸಿದ ಬಳಿಕ ‘ವೈಟ್ ಕಾಲರ್ ಭಯೋತ್ಪಾದನೆ’ ಚರ್ಚೆ ಆರಂಭವಾಗಿದೆ. ಈ ಹಿನ್ನೆಲೆ ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲ್ಲದೇ ರೈಲು ನಿಲ್ದಾಣದಲ್ಲಿ ಒಳಬರುವ ಮತ್ತು ಹೊರಹೋಗುವ ಎಲ್ಲಾ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಭದ್ರತಾ ದೃಷ್ಟಿಯಿಂದ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಮುದಾಯದ ಭಾಗವಹಿಸುವಿಕೆ ಮುಖ್ಯ. ಜಿಲ್ಲೆಯ (ಪೂಂಚ್) ಯಾವುದೇ ಭಾಗದಲ್ಲಿ ಭಯೋತ್ಪಾದಕರು ಅಥವಾ ಅವರ ಸಹಚರರ ಉಪಸ್ಥಿತಿ ಅಥವಾ ಚಲನವಲನದ ಬಗ್ಗೆ ಮಾಹಿತಿ ನೀಡಿವರಿಗೆ ₹5 ಲಕ್ಷ ಬಹುಮಾನ ನೀಡಲಾಗುವುದು. ಅಲ್ಲದೇ ಸುರಕ್ಷತೆಗಾಗಿ ಮಾಹಿತಿದಾರರ ಗುರುತನ್ನು ಗೋಪ್ಯವಾಗಿಡಲಾಗುವುದು ಎಂದು ಪೂಂಚ್ ಪೊಲೀಸರು ಭರವಸೆ ನೀಡಿದ್ದಾರೆ.
ಸಾರ್ವಜನಿಕರು ಜಾಗರೂಕರಾಗಿರಿ. ಭಯೋತ್ಪಾದಕರಿಗೆ ಆಹಾರ, ಆಶ್ರಯ, ಸಾರಿಗೆ ಸೇರಿದಂತೆ ಯಾವುದೇ ರೀತಿಯ ಬೆಂಬಲ ನೀಡುವ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.