ಪ್ರಾತಿನಿಧಿಕ ಚಿತ್ರ
ಜಮ್ಮು: ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್‌ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ.
ಆಗಸ್ಟ್ 26 (ಮಂಗಳವಾರ)ರಿಂದ ಜಮ್ಮುವಿನಲ್ಲಿ ಭಾರಿ ಮಳೆಯಾಗುತ್ತಿದೆ. ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಜನ, ವಿಶೇಷವಾಗಿ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಈ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಜಮ್ಮು ತಾವಿ-ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ-ಕೋಲ್ಕತ್ತ ಮತ್ತು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿಗೆ ರೈಲುಗಳು ಕಾರ್ಯಾಚರಿಸುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಪರ್ಕ ಕ್ರಾಂತಿ ಮತ್ತು ಸೀಲ್ಡಾ ಎಕ್ಸ್‌ಪ್ರೆಸ್ ರೈಲು, ಕಾಂತ್ರಿ ಎಕ್ಸ್‌ಪ್ರೆಸ್, ವಂದೇ ಭಾರತ್, ತಿರುವನಂತಪುರ ಎಕ್ಸ್‌ಪ್ರೆಸ್ ಕಾರ್ಯಾಚರಣೆ ಆರಂಭಿಸಿವೆ. ಸೆಪ್ಟೆಂಬರ್ 7 ರಿಂದ ವಂದೇ ಭಾರತ್ ರೈಲು ಕಾರ್ಯಾಚರಣೆ ಆರಂಭಿಸಲಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.