ADVERTISEMENT

ಜಮ್ಮು: ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಭಯೋತ್ಪಾದಕರಿಗಾಗಿ ಶೋಧ

ಪಿಟಿಐ
Published 1 ಫೆಬ್ರುವರಿ 2026, 13:43 IST
Last Updated 1 ಫೆಬ್ರುವರಿ 2026, 13:43 IST
   

ಜಮ್ಮು: ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಮೂವರು ಭಯೋತ್ಪಾದಕರಿಗಾಗಿ ಜಮ್ಮು–ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರವೂ ಶೋಧ ನಡೆಸಿದವು.

‘ಭಯೋತ್ಪಾದಕರು ಪದೇ ಪದೇ ತಮ್ಮ ಅಡಗುತಾಣಗಳನ್ನು ಬದಲಾಯಿಸುತ್ತಿದ್ದಾರೆ. ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕೆಲ ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಶನಿವಾರ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಒಬ್ಬ ಭಯೋತ್ಪಾದಕ ಗಾಯಗೊಂಡಿರುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಸುತ್ತಮುತ್ತಲಿನ ಪ್ರದೇಶಗಳಲ್ಲೂ ಶೋಧ ನಡೆಸಲಾಗುತ್ತಿದೆ. ಭಯೋತ್ಪಾದಕರಿಗೆ ಆಹಾರ ಮತ್ತು ವಸತಿ ಒದಗಿಸುತ್ತಿರುವವರ ಮೇಲೆಯೂ ತೀವ್ರ ನಿಗಾ ಇರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.