ADVERTISEMENT

ಜಮ್ಮು–ಶ್ರೀನಗರ ಹದ್ದಾರಿಯಲ್ಲಿ ಭೂಕುಸಿತ: ವ್ಯಕ್ತಿ ಮೃತ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 15:32 IST
Last Updated 7 ಮಾರ್ಚ್ 2023, 15:32 IST
   

ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ರಾಮ್‌ಬನ್‌ ಜಿಲ್ಲೆಯ ಜಮ್ಮು ಮತ್ತು ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳವಾರ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, 6 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಸೆರಿ ಗ್ರಾಮದ ಬಳಿ ಭೂಕುಸಿತ ಸಂಭವಿಸಿದೆ. ಹೆದ್ದಾರಿಯು ಹೂಳಿನಿಂದ ಮುಚ್ಚಿಹೋಗಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಮ್‌ಬನ್‌ ಹಿರಿಯ ಎಸ್‌ಪಿ ಮೋಹಿತಾ ಶರ್ಮಾ ಅವರು ತಿಳಿಸಿದರು.

ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳದಿಂದ ಹಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.