
ಬಂಧನ (ಸಾಂದರ್ಭಿಕ ಚಿತ್ರ)
ಜಮ್ಮು: ಜಮ್ಮುವಿನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಪ್ರಮುಖ ಶಂಕಿತನಾಗಿರುವ 19 ವರ್ಷದ ಯುವಕನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿರುವ ರಿಯಾಸಿ ಮೂಲದ ಆರೋಪಿಯನ್ನು ಬಹು ಫೋರ್ಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಸೆಕ್ಷನ್ 113(3) (ಭಯೋತ್ಪಾದನಾ ಚಟುವಟಿಕೆ) ಅಡಿಯಲ್ಲಿ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಆರೋಪಿಯು ಆನ್‌ಲೈನ್ ಮೂಲಭೂತವಾದಿಯಾಗಿದ್ದು, ಭಯೋತ್ಪಾದಕ ದಾಳಿಯನ್ನು ನಡೆಸಲು ಯೋಜಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ ಎಂದು ಅವರು ಹೇಳಿದ್ದಾರೆ.
‘ಯುವಕ, ಪಾಕಿಸ್ತಾನ ಮತ್ತು ಇತರ ವಿದೇಶಗಳಲ್ಲಿ ನೆಲೆಗೊಂಡಿರುವ ಕೆಲವರ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿರುವುದು, ನಿರಂತರ ಸಂಪರ್ಕದಲ್ಲಿದ್ದದ್ದು ಬೆಳಕಿಗೆ ಬಂದಿದೆ’ಎಂದು ಅವರು ಹೇಳಿದ್ದಾರೆ.
ಶಂಕಿತನ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಿಶ್ಲೇಷಿಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.