ADVERTISEMENT

ಜಮ್ಮು: ಇಬ್ಬರು ಭಯೋತ್ಪಾದಕರ ಹತ್ಯೆ

ಪಿಟಿಐ
Published 4 ಫೆಬ್ರುವರಿ 2026, 15:09 IST
Last Updated 4 ಫೆಬ್ರುವರಿ 2026, 15:09 IST
...
...   

ಜಮ್ಮು: ಜೈಷ್‌–ಎ–ಮೊಹಮ್ಮದ್‌ ಸಂಘಟನೆಯ ಸ್ವಯಂಘೋಷಿತ ಉನ್ನತ ಕಮಾಂಡರ್‌ ಸೇರಿದಂತೆ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು–ಕಾಶ್ಮೀರದಲ್ಲಿ ಬುಧವಾರ ಹತ್ಯೆ ಮಾಡಿವೆ.

ಗುಪ್ತಚರ ಮಾಹಿತಿಯ ಆಧಾರದಲ್ಲಿ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ(ಸಿಆರ್‌ಪಿಎಫ್‌) ಸಿಬ್ಬಂದಿ ರಾಮನಗರ ಮತ್ತು ಬಸಂತ್‌ಗಢದಲ್ಲಿ 20 ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಇದಕ್ಕೆ ‘ಕಿಯಾ’ ಎಂದು ಹೆಸರಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ಆರಂಭಗೊಂಡಿತ್ತು. ‌ಗುಹೆಯೊಳಗೆ ಅವಿತಿದ್ದ ಇಬ್ಬರನ್ನು ಹತ್ಯೆ ಮಾಡಲಾಗಿದೆ.

ADVERTISEMENT

ಎಂ4 ಕಾರ್ಬೈನ್, ಎ.ಕೆ ಸರಣಿಯ ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತ ಭಯೋತ್ಪಾದಕರಲ್ಲಿ ಒಬ್ಬನನ್ನು ರುಬಾನಿ ಅಲಿಯಾಸ್‌ ಅಬು ಮವಿಯಾ ಎಂದು ಗುರುತಿಸಲಾಗಿದೆ. ಆತ ಈ ಪ್ರದೇಶದಲ್ಲಿ ಹಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.