ಸಾಂಕೇತಿಕ ಚಿತ್ರ
ಶ್ರೀನಗರ: ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವ ಸೇನಾ ಸಿಬ್ಬಂದಿ, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಉಗ್ರರ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಗುರೆಜ್ ಸೆಕ್ಟರ್‌ನಲ್ಲಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಸೇನೆ ಇಬ್ಬರನ್ನೂ ಹೊಡೆದುರುಳಿಸಿತು’ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಪ್ವಾರಾದಲ್ಲಿ ಕರ್ತವ್ಯನಿರತ ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಕರ್ತವ್ಯನಿರತ ಯೋಧ ಹವಾಲ್ದಾರ್ ಇಕ್ಬಾಲ್ ಅಲಿ ಮೃತಪಟ್ಟಿದ್ದಾರೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.