ADVERTISEMENT

ದೆಹಲಿಯಲ್ಲಿ ಅಮಿತ್‌ ಶಾ– ಜನಾರ್ದನ ರೆಡ್ಡಿ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 13:44 IST
Last Updated 15 ಮಾರ್ಚ್ 2024, 13:44 IST
ಅಮಿತ್‌ ಶಾ ಅವರಿಗೆ ಹೂಗುಚ್ಛ ನೀಡಿದ ಗಾಲಿ ಜನಾರ್ದನ ರೆಡ್ಡಿ
ಅಮಿತ್‌ ಶಾ ಅವರಿಗೆ ಹೂಗುಚ್ಛ ನೀಡಿದ ಗಾಲಿ ಜನಾರ್ದನ ರೆಡ್ಡಿ   

ನವದೆಹಲಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರೂ ಆಗಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚಿಸಿದರು. 

ಶಾ ಆಹ್ವಾನದ ಮೇರೆಗೆ ಭೇಟಿ ಮಾಡಿ ಸಮಾಲೋಚಿಸಿದ್ದೇನೆ ಎಂದು ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ. 

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಗಾಲಿ ಮತ ಚಲಾಯಿಸಿದ್ದರು. 

ADVERTISEMENT

‘ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಶಾ ಅವರು ಗಾಲಿ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಮೂಲಗಳು ಹೇಳಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.