ADVERTISEMENT

ಮರಾಠ ಸಮುದಾಯದ ಮೀಸಲಾತಿ: ಉಪವಾಸ ಅಂತ್ಯಗೊಳಿಸಿದ ಮನೋಜ್‌ ಜರಾಂಗೆ

ಪಿಟಿಐ
Published 30 ಜನವರಿ 2025, 13:36 IST
Last Updated 30 ಜನವರಿ 2025, 13:36 IST
ಮನೋಜ್‌ ಜರಾಂಗೆ 
ಮನೋಜ್‌ ಜರಾಂಗೆ    

ಜಾಲ್ನಾ: ಮರಾಠ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಮನೋಜ್‌ ಜರಾಂಗೆ ಅವರು ಐದು ದಿನಗಳ ಬಳಿಕ ಗುರುವಾರ ಉಪವಾಸವನ್ನು ಮುಕ್ತಾಯಗೊಳಿಸಿದ್ದಾರೆ. 

ಮರಾಠ ಸಮುದಾಯಕ್ಕೆ ಮೀಸಲಾತಿ ಹಾಗೂ ಮೀಸಲು ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ. ಇದನ್ನು ಈಡೇರಿಸದಿದ್ದರೆ ಮರಾಠ ಸಮುದಾಯದ ಜನರು ಮುಂಬೈಗೆ ಪಾದಯಾತ್ರೆ ನಡೆಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.