
ಪಿಟಿಐ
ನರೇಂದ್ರ ಮೋದಿ
ನವದೆಹಲಿ: ದೇಶದ ಮೊದಲ ಪ್ರಧಾನ ಮಂತ್ರಿ ಜವಹರಲಾಲ್ ನೆಹರೂ ಅವರ ಜನ್ಮ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು.
‘ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನದ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
1889ರಲ್ಲಿ ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ಜನಿಸಿದ್ದ ನೆಹರೂ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದರು. 1964ರ ಮೇ 27ರಂದು ಮೃತಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.