ADVERTISEMENT

ರಾಜಸ್ಥಾನದಲ್ಲಿ ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನ; ಎಫ್‌ಐಆರ್ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ನವೆಂಬರ್ 2021, 15:09 IST
Last Updated 18 ನವೆಂಬರ್ 2021, 15:09 IST
ಟ್ವಿಟರ್ ಸ್ಕ್ರೀನ್‌ಶಾಟ್
ಟ್ವಿಟರ್ ಸ್ಕ್ರೀನ್‌ಶಾಟ್   

ಜೈಪುರ: ರಾಜಸ್ಥಾನದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಹರಿಸಿ ಮಹಿಳೆಯ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

'ರಾಜಸ್ಥಾನದ ಬಾರ್ಮರ್‌ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ' ಎಂದು ಎಸ್‌ಪಿ ದೀಪಕ್ ಭಾರ್ಗವ್ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದೆ.

ವಿಡಿಯೊದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವುದು ಕಂಡುಬಂದಿದೆ. ಜೆಸಿಬಿ ಮೇಲೆ ಮಹಿಳೆ ಕಲ್ಲು ಎಸೆಯುತ್ತಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಜೆಸಿಬಿ ಅಟ್ಟಾಡಿಸಿಕೊಂಡು ಹೋಗುವ ದೃಶ್ಯ ಸೆರೆಯಾಗಿದೆ.

ಈ ಘಟನೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿರುವ ಬಿಜೆಪಿ, ರಾಜಸ್ಥಾನದಲ್ಲಿ ಮಹಿಳೆಯರು ಸುರಕ್ಷಿತರಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ವಿರುದ್ಧ ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.