ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಪಿಟಿಐ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ‘ಭಾರತ ರತ್ನ’ ನೀಡಬೇಕು ಎಂದು ಜೆಡಿಯು ಸಂಸದೆ ಲವ್ಲಿ ಆನಂದ್ ಒತ್ತಾಯಿಸಿದರು.
ಲೋಕಸಭೆಯಲ್ಲಿ ಮಂಗಳವಾರ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಅವರು, ಆಡಳಿತ ಮತ್ತು ಅಭಿವೃದ್ಧಿಗೆ ಈ ಇಬ್ಬರೂ ನೀಡಿದ ಕೊಡುಗೆಗಾಗಿ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಬೇಕು ಎಂದು ಆಗ್ರಹಿಸಿದರು.
‘ಜವಾಹರಲಾಲ್ ನೆಹರೂ ಅವರಿಗೆ ಭಾರತ ರತ್ನ ಕೊಡಲಾಗಿದೆ. ಮೋದಿ ದೇಶಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಪ್ರಧಾನಿ ಆಗುವುದಕ್ಕೂ ಮುನ್ನ ದೇಶದ ಸ್ಥಿತಿ ಹೇಗಿತ್ತು’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.