ADVERTISEMENT

ಮೋದಿ–ಜೆ.ಡಿ.ವ್ಯಾನ್ಸ್‌ ಭೇಟಿ: ಭಾರತದ ಕಳವಳ ಪ್ರಸ್ತಾಪಿಸಲು ಕಾಂಗ್ರೆಸ್‌ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಏಪ್ರಿಲ್ 2025, 11:38 IST
Last Updated 20 ಏಪ್ರಿಲ್ 2025, 11:38 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಮತ್ತು&nbsp;ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್</p></div>

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್

   

ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಸೋಮವಾರ ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಭಾರತೀಯರ ಗಡೀಪಾರು, ಪ್ರತಿ ಸುಂಕ, ವಿದ್ಯಾರ್ಥಿಗಳ ಸಾವಿಗೆ ಸಂಬಂಧಿಸಿದಂತೆ ಭಾರತದ ಕಳವಳವನ್ನು ಪ್ರಸ್ತಾಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ಆಗ್ರಹಿಸಿದೆ.

ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ADVERTISEMENT

‘ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿರುವ ರೀತಿ ಮತ್ತು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಮೆರಿಕದಲ್ಲಿ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿರುವುದರ ಕುರಿತು ನಮ್ಮ ಕಳವಳವನ್ನು ಅವರಿಗೆ ಮನದಟ್ಟು ಮಾಡಿ ಎಂದು ಹೇಳಿದೆ.

ವ್ಯಾಪಾರ ವ್ಯವಸ್ಥೆಯ ಸಂಪೂರ್ಣ ನಾಶ ಹಾಗೂ ಪ್ಯಾರಿಸ್ ಒಪ್ಪಂದ ಮತ್ತು ಡಬ್ಲ್ಯೂಎಚ್‌ಒನಿಂದ ಅಮೆರಿಕ ಹಿಂದೆ ಸರಿದಿರುವ ಕುರಿತು ಭಾರತದ ಕಳವಳವನ್ನು ಅವರ ಮುಂದೆ ವ್ಯಕ್ತಪಡಿಸುವಿರಾ? ಎಂದು ಕೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.