ನವದೆಹಲಿ: ಮುಂದಿನ ವರ್ಷದಿಂದ ಜಂಟಿ ಪ್ರವೇಶ ಪರೀಕ್ಷೆಯನ್ನು (ಜೆಇಇ)ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ಗುರುವಾರ ನಿರ್ಧರಿಸಿದೆ. ಸದ್ಯ ಇಂಗ್ಲಿಷ್, ಹಿಂದಿ ಹಾಗೂ ಗುಜರಾತಿ ಭಾಷೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಯಾವ ಯಾವ ಭಾಷೆಗಳಲ್ಲಿ ಜೆಇಇ ಮೇನ್ ಪರೀಕ್ಷೆ ನಡೆಸಲಾಗುವುದು ಎಂಬ ಮಾಹಿತಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸ್ಪಷ್ಟಪಡಿಸಿಲ್ಲ.
ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ನಡೆದರೆ ಪ್ರಶ್ನೆಗಳನ್ನು ಉತ್ತಮವಾಗಿ ಅರ್ಥಮಾಡಿಕೊಂಡು ಹೆಚ್ಚಿನ ಅಂಕ ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯ ಆಗಲಿದೆ ಎಂದು ನಿಶಾಂಕ್ ಹೇಳಿದ್ದಾರೆ.
ರಾಜ್ಯಗಳ ಮನವಿಯಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಬರಲಾಗಿದೆಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪ್ರಾದೇಶಿಕ ಭಾಷೆಯಲ್ಲಿ ನಡೆಸಿದ ಪರೀಕ್ಷೆಯ ಆಧಾರದ ಮೇಲೆ ಆಯಾ ರಾಜ್ಯಗಳ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.