ನವದೆಹಲಿ: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ‘ಜೆಇಇ–ಮೇನ್’ ಎರಡನೇ ಆವೃತ್ತಿಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕರ್ನಾಟಕದ ಒಬ್ಬರು ಸೇರಿ 24 ಪರೀಕ್ಷಾರ್ಥಿಗಳು ಶೇಕಡ 100 ಅಂಕ ಗಳಿಸಿದ್ದಾರೆ.
ರಾಜಸ್ಥಾನದ ಏಳು ಮಂದಿ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಿಂದ ತಲಾ ಮೂವರು ಹಾಗೂ ದೆಹಲಿ, ಪಶ್ಚಿಮ ಬಂಗಾಳ ಮತ್ತು ಗುಜರಾತ್‌ನಿಂದ ತಲಾ ಇಬ್ಬರು ಹಾಗೂ ಕರ್ನಾಟಕ, ಆಂಧ್ರ ಪ್ರದೇಶದಿಂದ ತಲಾ ಒಬ್ಬ ಅಭ್ಯರ್ಥಿ ಶೇಕಡ 100 ಅಂಕ ಗಳಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. 24 ಮಂದಿಯ ಪೈಕಿ ಇಬ್ಬರು ಮಹಿಳೆಯರು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪ್ರಕಟಿಸಿದೆ.
ಶೇಕಡ 100 ಅಂಕ ಗಳಿಸಿದವರಲ್ಲಿ ಸಾಮಾನ್ಯ ವರ್ಗದ 21 ಮಂದಿ ಹಾಗೂ ಒಬಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಲಾ ಒಬ್ಬ ಅಭ್ಯರ್ಥಿ ಇದ್ದಾರೆ.
ಮೊದಲ ಆವೃತ್ತಿಯಲ್ಲಿ 10.61 ಲಕ್ಷ ಮಂದಿ ಮತ್ತು ಎರಡನೇ ಆವೃತ್ತಿಯಲ್ಲಿ 9.92 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಎರಡನೇ ಆವೃತ್ತಿಯ ಪರೀಕ್ಷೆ ಸಂದರ್ಭದಲ್ಲಿ 110 ಅಭ್ಯರ್ಥಿಗಳು ನಕಲಿ ದಾಖಲೆ ಸಲ್ಲಿಸಿರುವುದು ಪತ್ತೆಯಾಗಿದ್ದು, ಅವರ ಫಲಿತಾಂಶವನ್ನು ಪ್ರಕಟಿಸಿಲ್ಲ ಎಂದು ಎನ್‌ಟಿಎ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.