ಶ್ರೀನಗರ: ಜೈಶ್ ಇ ಮೊಹಮ್ಮದ್ (ಜೆಇಎಂ) ಸಂಘಟನೆಯು ಪುಲ್ವಾಮಾ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಭಯೋತ್ಪಾದನಾ ಕೃತ್ಯದ ಸಂಚನ್ನು ಭೇದಿಸಿರುವ ಭದ್ರತಾ ಪಡೆಯು, ಈ ಸಂಘಟನೆಯ ಎಂಟು ಮಂದಿ ಸಹಚರರನ್ನು ಬಂಧಿಸಿದೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾ ವಲಯದಲ್ಲಿ ಕೃತ್ಯ ನಡೆಸಲು ಸಂಚು ನಡೆದಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಯಿತು. ಬಂಧಿತರಿಂದ ಶಸ್ತ್ರಾಸ್ತ್ರಗಳು ಹಾಗೂ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.