
ಪಿಟಿಐ
ಮೇದಿನಿನಗರ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಗುರುವಾರ ಬೆಳಿಗ್ಗೆ ರಾಮಘಡದಲ್ಲಿ ಈ ಘಟನೆ ನಡೆದಿದೆ. ನಾಲ್ವರು ಆರೋಪಿಗಳನ್ನು ಶುಕ್ರವಾರ ಬಂಧಿಸಲಾಗಿದ್ದು, ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.