ADVERTISEMENT

ಜಾರ್ಖಂಡ್‌: 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2023, 10:14 IST
Last Updated 19 ಆಗಸ್ಟ್ 2023, 10:14 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಂಚಿ: ಜಾರ್ಖಂಡ್‌ ರಾಜ್ಯದಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಸರ್ಕಾರದ ಅಧಿಕಾರಿಗಳು ಖಚಿತಪಡಿಸಿದ್ದಾರೆ. 

ರಾಮಗಢ ಜಿಲ್ಲೆಯ ನಿವಾಸಿಯೊಬ್ಬರು ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗುವನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ರಿಮ್ಸ್‌) ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು, ಮಗುವಿನ ಮೂಗು ಮತ್ತು ಗಂಟಲಿನ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದರು. ವರದಿಯಲ್ಲಿ ಮಗುವಿಗೆ ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ವೈದ್ಯ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಈ ಆಸ್ಪತ್ರೆಯಲ್ಲಿ ವರ್ಷದ ಮೊದಲ ಹಕ್ಕಿ ಜ್ವರ ಪ್ರಕರಣ ಇದಾಗಿದೆ. ಮಗುವನ್ನು ನಿಗಾ ಘಟಕದಲ್ಲಿ ಇರಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.