ADVERTISEMENT

ಜಾರ್ಖಂಡ್‌ | ಬಸ್-ಟ್ರಕ್ ಡಿಕ್ಕಿ: ಐವರು ಕಾವಡ್ ಯಾತ್ರಿಕರ ಸಾವು, 23 ಮಂದಿಗೆ ಗಾಯ

ಪಿಟಿಐ
Published 29 ಜುಲೈ 2025, 5:16 IST
Last Updated 29 ಜುಲೈ 2025, 5:16 IST
<div class="paragraphs"><p>ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬಸ್‌</p></div>

ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬಸ್‌

   

–ಪಿಟಿಐ ಚಿತ್ರ

ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಕಾವಡ್ ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 23 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯದ ಬಳಿ ಮುಂಜಾನೆ 4.30ರ ಸುಮಾರಿಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ದುಮ್ಕಾ ವಲಯದ ಹಿರಿಯ ಪೊಲೀಸ್ ಅಧಿಕಾರಿ ಶೈಲೇಂದ್ರ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ಹಲವಾರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವುನೋವು ಹೆಚ್ಚಾಗಬಹುದು ಎಂದು ಕುಮಾರ್ ಹೇಳಿದ್ದಾರೆ.

‘ನನ್ನ ಲೋಕಸಭಾ ಕ್ಷೇತ್ರದ ದಿಯೋಘರ್‌ನಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 18 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂಸದ ನಿಶಿಕಾಂತ್ ದುಬೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ದಿಯೋಘರ್‌ ಮೋಹನ್‌ಪುರದ ಜಮುನಿಯಾ ಚೌಕ್ ಬಳಿ ಸಂಭವಿಸಿದ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಭಕ್ತರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ’ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.