ADVERTISEMENT

ಮೋದಿ– ಸೊರೇನ್‌ ಭೇಟಿ

ಪಿಟಿಐ
Published 15 ಜುಲೈ 2024, 14:26 IST
Last Updated 15 ಜುಲೈ 2024, 14:26 IST
ಪ್ರಧಾನಿ ನರೇಂದ್ರ ಮೋದಿ ಮತ್ತು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ದೆಹಲಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು   –ಪಿಟಿಐ ಚಿತ್ರ 
ಪ್ರಧಾನಿ ನರೇಂದ್ರ ಮೋದಿ ಮತ್ತು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ದೆಹಲಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು   –ಪಿಟಿಐ ಚಿತ್ರ    

ನವದೆಹಲಿ: ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು. 

ರಾಜ್ಯದ ಮುಖ್ಯಮಂತ್ರಿಯಾಗಿ ಪುನಃ ಅಧಿಕಾರ ವಹಿಸಿಕೊಂಡ ಬಳಿಕ ಅವರು ಮೊದಲನೇ ಬಾರಿಗೆ ಮೋದಿ ಅವರನ್ನು ಭೇಟಿಯಾದರು. ಮೋದಿ ಜೊತೆಗಿರುವ ಚಿತ್ರವನ್ನು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಇದೊಂದು ಸೌಜನ್ಯದ ಭೇಟಿ’ ಎಂದು ಹೇಳಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದಲ್ಲಿ ಜಾರಿ ನಿರ್ದೇಶನಾಲಯವು ಸೊರೇನ್‌ ಅವರನ್ನು ಜನವರಿ 31ರಂದು ಬಂಧಿಸಿತ್ತು. ಅದಕ್ಕೂ ಮುನ್ನ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರಿಗೆ ಜಾಮೀನು ದೊರೆತ ಬಳಿಕ, ಜುಲೈ 4ರಂದು ಅವರು ಪುನಃ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.