ADVERTISEMENT

ಜಾರ್ಖಂಡ್‌:ಕಲ್ಲಿದ್ದಲು ಗಣಿ ಕುಸಿತ; ವ್ಯಕ್ತಿ ಸಾವು, ಹಲವು ಮಂದಿ ಸಿಲುಕಿರುವ ಶಂಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2025, 8:02 IST
Last Updated 5 ಜುಲೈ 2025, 8:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮಗಢ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಶೋಧ ಕಾರ್ಯಾಚರಣೆಯ ವೇಳೆ ಒಂದು ಮೃತದೇಹ ಪತ್ತೆಯಾಗಿದೆ. ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಕೆಲವು ಗ್ರಾಮಸ್ಥರು ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಬೆಳಿಗ್ಗೆ ಮಾಹಿತಿ ಸಿಕ್ಕಿದ್ದು. ಈ ಸಂಬಂಧ ತನಿಖೆ ನಡೆಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರಾಮಗಢ ಜಿಲ್ಲಾಧಿಕಾರಿ ಫೈಜ್ ಅಕ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.