ADVERTISEMENT

ಹಣ ಅಕ್ರಮ ವರ್ಗಾವಣೆ ತನಿಖೆ: ಜಾರ್ಖಂಡ್‌ನಲ್ಲಿ ₹ 3 ಕೋಟಿ ನಗದು ವಶಪಡಿಸಿಕೊಂಡ ಇ.ಡಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 12:37 IST
Last Updated 3 ಮಾರ್ಚ್ 2023, 12:37 IST
.
.   

ನವದೆಹಲಿ, ರಾಂಚಿ; ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಶೋಧ ನಡೆಸಿದ ವೇಳೆ ಸುಮಾರು ₹3 ಕೋಟಿ ನಗದು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್ ಇ ಅನ್ಸಾರಿ ಎಂಬ ವ್ಯಕ್ತಿಯ ಸ್ಥಳಗಳಿಂದ ₹ 500 ಮತ್ತು ₹2,000 ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದರು. ‌

2000ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಎಂಜಿಎನ್ಆರ್‌ಇಜಿಎ ಯೋಜನೆ ಅಕ್ರಮಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾಣೆ ಆರೋಪದ ಮೇಲೆ ಮೇ 11 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ADVERTISEMENT

ಅನಾರೋಗ್ಯದಿಂದ ಬಳಲುತ್ತಿರುವ ಮಗಳನ್ನು ನೋಡಿಕೊಳ್ಳಲು ಅವರಿಗೆ ಫೆಬ್ರುವರಿಯಲ್ಲಿ ಸುಪ್ರೀಂ ಕೋರ್ಟ್ ಎರಡು ತಿಂಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಅಡಿ ದಾಖಲಾದ ಎರಡನೇ ಪ್ರಕರಣದ ಭಾಗವಾಗಿ ರಾಜ್ಯದ ಗಣಿಗಾರಿಕೆ ಕ್ಷೇತ್ರದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ಪಾತ್ರದ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.