ADVERTISEMENT

ಲಾಲೂ ಪ್ರಸಾದ್‌ ಯಾದವ್‌ ಜಾಮೀನು ಅರ್ಜಿ ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌

ಏಜೆನ್ಸೀಸ್
Published 19 ಫೆಬ್ರುವರಿ 2021, 13:21 IST
Last Updated 19 ಫೆಬ್ರುವರಿ 2021, 13:21 IST
ಲಾಲೂ ಪ್ರಸಾದ್‌ ಯಾದವ್‌
ಲಾಲೂ ಪ್ರಸಾದ್‌ ಯಾದವ್‌   

ರಾಂಚಿ: ದುಮ್ಕಾ ಖಜಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ಮಂಜೂರು ಮಾಡಲು ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಲಾಲೂ ಪ್ರಸಾದ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ನ್ಯಾಯಮೂರ್ತಿ ಅಪರೇಶ್‌ ಕುಮಾರ್ ಸಿಂಗ್ ತಿರಸ್ಕರಿಸಿದ್ದಾರೆ.

'ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್‌ ಅವರು ತಮ್ಮ ಒಟ್ಟು ಶಿಕ್ಷೆಯ ಅರ್ಧದಷ್ಟು ಅವಧಿಯನ್ನು ಪೂರ್ಣಗೊಳಿಸಲು ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಆ ಕಾರಣಕ್ಕಾಗಿ ಜಾಮೀನು ಅರ್ಜಿಯನ್ನು ಮಾನ್ಯ ಮಾಡಲಾಗಿಲ್ಲ. ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸುವಂತೆ ಅವರಿಗೆ ಆದೇಶಿಸಲಾಗಿದೆ' ಎಂದು ನ್ಯಾಯಾಲಯ ತಿಳಿಸಿದೆ.

ADVERTISEMENT

ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ಪೈಕಿ ಮೂರರಲ್ಲಿ ಲಾಲೂ ಪ್ರಸಾದ್‌ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ದುಮ್ಕಾ ಖಜಾನೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅವರಿಗೆ ಜಾಮೀನು ತಿರಸ್ಕರಿಸಲಾಗಿದೆ.

72 ವಯಸ್ಸಿನ ಲಾಲೂ ಪ್ರಸಾದ್‌ ಯಾದವ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.