ADVERTISEMENT

ಇ.ಡಿ ಸಮನ್ಸ್‌ ಪ್ರಶ್ನಿಸಿ ಸೊರೇನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2023, 6:07 IST
Last Updated 13 ಅಕ್ಟೋಬರ್ 2023, 6:07 IST
ಹೇಮಂತ್‌ ಸೊರೇನ್‌
ಹೇಮಂತ್‌ ಸೊರೇನ್‌   

ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್‌ ಪ್ರಶ್ನಿಸಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಶುಕ್ರವಾರ) ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.

ಇ.ಡಿ ಸಮನ್ಸ್‌ ಪ್ರಶ್ನಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕರೂ ಆದ ಹೇಮಂತ್‌ ಸೊರೇನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸೆ. 18ರಂದು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಈ ವಿಚಾರವಾಗಿ ಪರಿಹಾರಕ್ಕಾಗಿ ಜಾರ್ಖಂಡ್‌ ಹೈಕೋರ್ಟ್‌ ಮೊರೆ ಹೋಗಲು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠವು ಅವಕಾಶ ಕಲ್ಪಿಸಿತ್ತು.

ಇ.ಡಿ ಸಮನ್ಸ್ ಪ್ರಶ್ನಿಸಿ ಸೆ.23ರಂದು ಹೇಮಂತ್‌ ಸೊರೇನ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.