ADVERTISEMENT

ಮೇವು ಹಗರಣ: ಲಾಲು ಪ್ರಸಾದ್ ಯಾದವ್‌ಗೆ ಜಾಮೀನು ಮಂಜೂರು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:04 IST
Last Updated 17 ಏಪ್ರಿಲ್ 2021, 8:04 IST
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್   

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್‌ನ ಹೈಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಶಿಕ್ಷೆಗೆ ಗುರಿಯಾಗಿದ್ದರು.ಮೂರರಲ್ಲಿ ಈಗಾಗಲೇ ಅವರುಜಾಮೀನು ಪಡೆದಿದ್ದಾರೆ. ನಾಲ್ಕನೇ ಡುಮ್ಕಾ ಖಜಾನೆ ಪ್ರಕರಣದಲ್ಲೂ ಇದೀಗ ಲಾಲೂ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿರುವುದರಿಂದ ಅವರು ಜೈಲಿನಿಂದ ಹೊರಬರಲಿದ್ದಾರೆ.

ಡುಮ್ಕಾ ಖಜಾನೆಯಿಂದ ₹ 3.13 ಕೋಟಿ ಅಕ್ರಮವಾಗಿ ವಿಥ್ ಡ್ರಾ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆಲಾಲು ಯಾದವ್ ಅವರಿಗೆ 7 ವರ್ಷ ಶಿಕ್ಷೆಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.