ADVERTISEMENT

ಗುಂಡಿನ ಚಕಮಕಿ: ಮಾವೋವಾದಿ ಸಂಘಟನೆಯ ಕಮಾಂಡರ್‌ ಹತ್ಯೆ

ಪಿಟಿಐ
Published 24 ಜನವರಿ 2023, 12:55 IST
Last Updated 24 ಜನವರಿ 2023, 12:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಂಚಿ: ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಠಾಕೂರ್‌ಗಾಂವ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆ ಪೀಪಲ್ಸ್‌ ಲಿಬರೇಶನ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಲ್‌ಎಫ್‌ಐ)ದ ಪ್ರಾದೇಶಿಕ ಕಮಾಂಡರ್‌ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತ ಮಾವೋವಾದಿಯನ್ನು ವಿಶಾಲ್‌ ಶರ್ಮಾ ಅಲಿಯಾಸ್‌ ವಿಶಾಲ್‌ ಸಾಹು ಎಂದು ಗುರುತಿಸಿದ್ದು, ಆತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದೂ ವಿವರಿಸಿದ್ದಾರೆ

ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.