ರಾಮದಾಸ್ ಸೊರೇನ್
(ಚಿತ್ರ ಕೃಪೆ: X/@HemantSorenJMM)
ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಶುಕ್ರವಾರ ನಿಧನರಾಗಿದ್ದಾರೆ ಎಂದು ಜೆಎಂಎಂ ಪಕ್ಷದ ವಕ್ತಾರ ಕುನಾಲ್ ಸಾರಂಗಿ ತಿಳಿಸಿದ್ದಾರೆ.
ಸೊರೇನ್ ಅವರಿಗೆ 62 ವರ್ಷ ವಯಸ್ಸಾಗಿತ್ತು. ತಮ್ಮ ನಿವಾಸದ ಸ್ನಾನಗೃಹದಲ್ಲಿ ಇತ್ತೀಚೆಗೆ ಜಾರಿ ಬಿದ್ದು ಅವರ ತಲೆಗೆ ಪೆಟ್ಟಾಗಿತ್ತು.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು, ಆಗಸ್ಟ್ 2ರಂದು ಏರ್‌ಲಿಫ್ಟ್ ಮಾಡಿ ದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಸೊರೇನ್ ಅವರು ಇಂದು ಮೃತಪಟ್ಟಿದ್ದಾರೆ ಎಂದು ಸಾರಂಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.