ಸಂಗ್ರಹ ಚಿತ್ರ
ಪಿಟಿಐ
ಲತೇಹಾರ್: ನಿಷೇಧಿತ ಜೆಜೆಎಂಪಿ ಮಾವೋವಾದಿ ಸಂಘಟನೆಯ ಒಂಬತ್ತು ಸದಸ್ಯರು (ನಕ್ಸಲರು) ಸೋಮವಾರ ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯಯಾಗಿದ್ದ ಇವರ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿದ್ದವು. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇವರ ತಲೆಗೆ ಒಟ್ಟು ₹23 ಲಕ್ಷ ಇನಾಮು ಘೋಷಿಸಲಾಗಿತ್ತು. 21 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ ಸದಸ್ಯ ಮುಖೇಶ್ ಗಂಜು ಶರಣಾಗಿದ್ದಾನೆ.
ಉಳಿದಂತೆ 10 ಪ್ರಕರಣಗಳಲ್ಲಿ ಬೇಕಾಗಿದ್ದ ಅಖಿಲೇಶ್ ರವೀಂದ್ರ ಯಾದವ್ ಮತ್ತು ಗಂಜು ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳು ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಂಬತ್ತು ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶರಣಾದವರಿಂದ ಎಕೆ–47, ರೈಫಲ್‌ಗಳು, ಕಾರ್ಟ್ರಿಡ್ಜ್ ಸೇರಿದಂತೆ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.