ಬಂಧನ
(ಪ್ರಾತಿನಿಧಿಕ ಚಿತ್ರ)
ಖುಂಟಿ: ನಿಷೇಧಿತ ಸಂಘಟನೆ ‘ಪೀಪಲ್ಸ್ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ’ದ ನಾಲ್ವರು ಸದಸ್ಯರನ್ನು ಬಂಧಿಸಿರುವ ಜಾರ್ಖಂಡ್ ಪೊಲೀಸರು, ಸರ್ಕಾರಿ ಗುತ್ತಿಗೆದಾರನ ಸುಲಿಗೆ ಯತ್ನವನ್ನು ವಿಫಲಗೊಳಿಸಿದ್ದಾರೆ.
ಸುಳಿವಿನ ಅಧಾರದಲ್ಲಿ ಜಿಬಿಲಾಂಗ್ ಟಂಗ್ರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಯಿತು. ಬಂಧಿತರಲ್ಲಿ ಒಬ್ಬನಾದ ಓಜಾ ಪಹನ್ ವಾಹನಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈ ಹಿಂದೆ ಜೈಲು ಶಿಕ್ಷೆ ಅನುಭವಿಸಿದ್ದ. ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ 10 ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಪಿ ಮನೀಷ್ ಟೊಪ್ಪೊ ಅವರು ತಿಳಿಸಿದ್ದಾರೆ.
ಎರಡು ಶಸ್ತ್ರಾಸ್ತ್ರ ಮತ್ತು ಸ್ಫೋಟಕ, ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ವಸ್ತುಗಳು ಹಾಗೂ ಗುತ್ತಿಗೆದಾರರು ಮತ್ತು ಉದ್ಯಮಿಗಳನ್ನು ಬೆದರಿಸಲು ಬಳಸುತ್ತಿದ್ದ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
‘ಪೆಟ್ರೋಲ್ ತುಂಬಿದ್ದ ಪ್ಲಾಸ್ಟಿಕ್ ಬಾಟಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲು ಅದನ್ನು ಬಳಸಲಾಗುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.