ADVERTISEMENT

ಬ್ಲ್ಯಾಕ್‌ಮೇಲ್ ಆರೋಪ: ಜಾರ್ಖಂಡ್‌ನಲ್ಲಿ ಖಾಸಗಿ ವಾಹಿನಿ ಮುಖ್ಯಸ್ಥನ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2022, 6:32 IST
Last Updated 17 ಜುಲೈ 2022, 6:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ: ಸುಲಿಗೆ, ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ‘ನ್ಯೂಸ್ 11 ಭಾರತ್’ ಖಾಸಗಿ ವಾಹಿನಿ ಮುಖ್ಯಸ್ಥ ಅರೂಪ್ ಚಟರ್ಜಿಯನ್ನು ಧನ್‌ಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಜೂನ್ 27ರಂದು ಉದ್ಯಮಿ ರಾಕೇಶ್ ಕುಮಾರ್ ಅವರು ಅರೂಪ್ ಚಟರ್ಜಿ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಅರೂಪ್ ಚಟರ್ಜಿ ಅವರನ್ನುಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 193, 386, 387, 418, 420, 468, 469, 500, 500, 503ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ADVERTISEMENT

ಇತ್ತೀಚೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕುರಿತು ತಿರುಚಿದ ವಿಡಿಯೊ ಪ್ರಸಾರ ಮಾಡಿದ ಆರೋಪದಡಿ ಝೀ ನ್ಯೂಸ್‌ ವಾಹಿನಿ ನಿರೂಪಕ ರೋಹಿತ್‌ ರಂಜನ್‌ ಅವರನ್ನು ಬಂಧಿಸಿದ ನೊಯ್ಡಾ ಪೊಲೀಸರು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೈರ್‌ ಅವರನ್ನುಇತ್ತೀಚೆಗೆ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.