
ಚಳಿ (ಪ್ರಾತಿನಿಧಿಕ ಚಿತ್ರ)
ರಾಂಚಿ: ತೀವ್ರ ಶೀತಗಾಳಿ ಹಾಗೂ ದಟ್ಟ ಮಂಜಿನ ವಾತಾವರಣ ಇರಲಿರುವ ಕಾರಣ ಜ.6ರಿಂದ 8ರವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಜಾರ್ಖಂಡ್ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾರಕ್ಷತಾ ಇಲಾಖೆಯು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ–ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳು (ಅಲ್ಪಸಂಖ್ಯಾತ ಶಾಲೆಗಳೂ ಸೇರಿ) ಜ.6ರಿಂದ 8ರವರೆಗೆ ಮುಚ್ಚಿರುತ್ತವೆ ಎಂದು ತಿಳಿಸಲಾಗಿದೆ.
ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಂದ 12ನೇ ತರಗತಿಯ ವಿದ್ಯಾರ್ಥಿಗಳವರೆಗೂ ಈ ಆದೇಶ ಅನ್ವಯಿಸಲಿದೆ. ಶಾಲೆ ಮುಚ್ಚಿರುವ ಈ ಅವಧಿಯಲ್ಲಿ ಯಾವುದೇ ನಿಯಮಿತ ಶೈಕ್ಷಣಿಕ ಚಟುವಟಿಕೆ ನಡೆಯುವುದಿಲ್ಲ ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆದರೆ, ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಶಾಲೆಗೆ ಹಾಜರಾಗಿ ತಮಗೆ ವಹಿಸಲಾದ ಪಠ್ಯೇತರ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದೂ ಇಲಾಖೆ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.