ಜಮ್ಮು: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಭಾನುವಾರ ಇಲ್ಲಿನ ಸೇನಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ಯೋಧರ ಆರೋಗ್ಯ ವಿಚಾರಿಸಿದರು.
‘ಆಪರೇಷನ್ ಸಿಂಧೂರ’ ಬಳಿಕ ಪಾಕಿಸ್ತಾನದ ಜೊತೆಗೆ ಸಂಘರ್ಷದಲ್ಲಿ ಯೋಧರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಗಾಯಗೊಂಡ ಯೋಧರ ಧೈರ್ಯ, ಹೋರಾಟವನ್ನು ಶ್ಲಾಘಿಸಿದ ಅವರು, ದಾಳಿ ವೇಳೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ ಬ್ರಿಗೇಡಿಯರ್ ಫಯಾಜ್ ಅಹಮ್ಮದ್ ನೇತೃತ್ವದ ವೈದ್ಯಕೀಯ ಸಿಬ್ಬಂದಿಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
‘ಗಾಯಗೊಂಡು ಸೇನಾ ಆಸ್ಪತ್ರೆಗೆ ದಾಖಲಾದ ಯೋಧರನ್ನು ಇತ್ತೀಚಿಗೆ ಭೇಟಿಯಾದೆ. ಅವರ ಹೋರಾಟ, ಧೈರ್ಯ ಗಮನಿಸಿ, ನಾನು ನಿಜಕ್ಕೂ ವಿನೀತನಾಗಿದ್ದೇನೆ. ದೇಶವೂ ಅವರಿಗೆ ಋಣಿಯಾಗಿದೆ ಎಂದು ಭಾವಿಸಿದ್ದೇನೆ’ ಎಂದು ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.