ADVERTISEMENT

ಜಾಲತಾಣದಲ್ಲಿ ಸುಳ್ಳು ಸುದ್ದಿ: ವಿಪಿಎನ್‌ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 21:11 IST
Last Updated 21 ಫೆಬ್ರುವರಿ 2020, 21:11 IST

ಶ್ರೀನಗರ: ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಬಳಕೆದಾರರನ್ನು ಪೊಲೀಸರು ಪ್ರಶ್ನೆ ಮಾಡಲು ಆರಂಭಿಸುತ್ತಿದ್ದಂತೆ ನಾಗರಿಕರು ’ಖಾಸಗಿ ಅಂತರ್ಜಾಲ ವ್ಯವಸ್ಥೆ‘ಗಳನ್ನು (ವಿಪಿಎನ್‌–ವರ್ಚ್ಯುವಲ್‌ ಪ್ರೈವೇಟ್‌ ನೆಟ್‌ವರ್ಕ್‌) ತೆಗೆದುಹಾಕಲು ಆರಂಭಿಸಿದ್ದಾರೆ.

ಜಾಲ ತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಕಾನೂನು ವಿರೋಧಿ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿಯಲ್ಲಿ ವಾರದ ಆರಂಭದಲ್ಲಿ ಮೊದಲ ದೂರು ದಾಖಲಾಗುತ್ತಿದ್ದಂತೆ ನಾಗರಿಕರು ಸ್ವಯಂಪ್ರೇರಿತವಾಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಹಲವು ಜನರನ್ನು ಪೊಲೀಸರು ಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.