ಅಮಿತ್ ಶಾ, ಓಮರ್ ಅಬ್ದುಲ್ಲಾ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಶೀಘ್ರದಲ್ಲಿ ಮರುಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿದ ನಂತರ ಆಯ್ಕೆಗೊಂಡ ಮೊದಲ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಶಾ ಅವರನ್ನು ಭೇಟಿ ಮಾಡಿದರು.
ಈ ಭೇಟಿಯ ನಂತರ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸ್ಥಾನಮಾನ ಶೀಘ್ರದಲ್ಲಿ ಮರುಸ್ಥಾಪಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಇದರೊಂದಿಗೆ ರಾಜ್ಯದ ವ್ಯವಹಾರಗಳನ್ನು ನಡೆಸುವ ನಿಯಮಗಳ (ಟಿಬಿಆರ್) ಕುರಿತು ಹಾಗೂ ಚುನಾಯಿತ ಸರ್ಕಾರದ ಅಧಿಕಾರ ವ್ಯಾಪ್ತಿಯ ಕುರಿತೂ ಸ್ಪಷ್ಟತೆಯನ್ನು ಕೋರಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರವು ಸದ್ಯ ಕೇಂದ್ರಾಡಳಿತ ಪ್ರದೇಶವಾಗಿದ್ದು, ನಮಗೆ ರಾಜ್ಯ ಸ್ಥಾನಮಾನ ಬೇಕಿದೆ. ಕೇಂದ್ರಾಡಳಿತ ಪ್ರದೇಶದ ಮೇಲೆ ಗೃಹ ಸಚಿವರಿಗೆ ವಿಶೇಷ ಅಧಿಕಾರ ಇದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.