ADVERTISEMENT

ಜಮ್ಮು-ಕಾಶ್ಮೀರದಲ್ಲಿ ಭಾರಿ ಹಿಮಪಾತ: ಸುಮಾರು ₹500 ಕೋಟಿ ಮೌಲ್ಯದ ಬೆಳೆ ನಷ್ಟ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2018, 12:15 IST
Last Updated 7 ನವೆಂಬರ್ 2018, 12:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿಗೆ ಸಂಭವಿಸಿದ ಭಾರಿ ಹಿಮಪಾತದಿಂದ ₹500 ಕೋಟಿಯಷ್ಟು ಮೌಲ್ಯದ ಬೆಳೆನಾಶವಾಗಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಪ್ರಾಥಮಿಕ ಅಂದಾಜಿನ ಪ್ರಕಾರ, 9,000 ಹೆಕ್ಟೇರ್‌ನಲ್ಲಿ ಕೃಷಿ ಮತ್ತು 53,000 ಹೆಕ್ಟೇರ್‌ನಲ್ಲಿ ತೋಟಗಾರಿಕಾ ಬೆಳೆ ನಾಶವಾಗಿದೆ. ಕೇಂದ್ರ ಸರ್ಕಾರದ ನೆರವು ಬೇಕಾಗುವಷ್ಟು ಹಾನಿ ಇದಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರು ಕೇಂದ್ರ ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಅವರಿಗೆ ಮನವರಿಕೆ ಮಾಡಿಸಿದ್ದಾರೆ.

ಹಾನಿ ಪ್ರದೇಶದ ಪರಿಶೀಲನೆಗೆ ಕೇಂದ್ರದಿಂದ ತಂಡ ಕಳುಹಿಸುವಂತೆ ಸುಬ್ರಹ್ಮಣ್ಯಂ ಮನವಿ ಮಾಡಿದ್ದಾರೆ ಎಂದು ಸರ್ಕಾರದ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.