ADVERTISEMENT

ಜಮ್ಮು: ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರನ ಹತ್ಯೆ

ಪಿಟಿಐ
Published 30 ಆಗಸ್ಟ್ 2021, 7:54 IST
Last Updated 30 ಆಗಸ್ಟ್ 2021, 7:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಸೋಮವಾರ ಮುಂಜಾನೆ ಉಗ್ರರು ಒಳನುಸುಳಲು ಯತ್ನಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ತಿಳಿಸಿದರು.

‘ಈ ಪ್ರದೇಶದಲ್ಲಿ ಕಾರ್ಯಾರಣೆ ಮುಂದುವರಿದಿದೆ. ಸೋಮವಾರ ಮುಂಜಾನೆ ಪೂಂಚ್‌ ಸೆಕ್ಟರ್‌ನ ಎಲ್‌ಒಸಿ ಬಳಿ ಉಗ್ರರು ಗಡಿ ದಾಟಲು ಪ್ರಯ್ನತಿಸಿದ್ದಾರೆ. ಸೇನೆಯು ಗಡಿ ದಾಟದಂತೆ ಎಚ್ಚರಿಕೆ ನೀಡಿದರೂ ಉಗ್ರರು ಮುಂದುವರಿದಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಅಲ್ಲಿಂದ ಎಕೆ–47 ರೈಫಲ್‌ ಸಿಕ್ಕಿದೆ’ ಎಂದು ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್‌ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT