ADVERTISEMENT

ಜಮ್ಮು ಕಾಶ್ಮೀರ: ಯುವಕನನ್ನು ಅಪಹರಿಸಿ ಹತ್ಯೆಗೈದ ಉಗ್ರರು

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2018, 3:39 IST
Last Updated 16 ನವೆಂಬರ್ 2018, 3:39 IST
   

ಪುಲ್ವಾಮಾ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯುವಕನ ಶವ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ.

ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕೊಲೆಯಾದ ವ್ಯಕ್ತಿಯನ್ನು ಸೋಫಿಯಾ ಜಿಲ್ಲೆಯ ಸಫ್ನಾಗ್ರಿ ನಿವಾಸಿ ನದೀಮ್ ಮಂಜೂರು ಎಂದು ಪೊಲೀಸರು ಗುರುತಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ADVERTISEMENT

‘ರಾತ್ರಿ ವೇಳೆ ನದೀಂ ಮಂಜೂರು ಎಂಬಾತನನ್ನು ಅಹರಿಸಿದ ಉಗ್ರರು ಬಳಿಕ ಹತ್ಯೆಗೈಯ್ಯುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಸ್ಥಳದಲ್ಲೇ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.