
(ಸಾಂದರ್ಭಿಕ ಚಿತ್ರ)
ಶ್ರೀನಗರ: ರಾಷ್ಟ್ರ ರಾಜಧಾನಿ ವಲಯದಲ್ಲಿರುವ ಫರಿದಾಬಾದ್‌ನ ಆಸ್ಪತ್ರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು 300 ಕೆ.ಜಿ ಆರ್‌ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಕಾಶ್ಮೀರಿ ವೈದ್ಯ ಡಾ. ಅದೀಲ್ ಅಹ್ಮದ್ ರಾಥರ್ ವಿಚಾರಣೆಯ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನ ಅಲ್ ಫಲಾಹ್ ಆಸ್ಪತ್ರೆಯಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರ್‌ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳ ಸಂಗ್ರಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ, ಭದ್ರತಾ ಪಡೆಗಳು ಕಾಶ್ಮೀರದ ಆಸ್ಪತ್ರೆಯಲ್ಲಿರುವ ಡಾ. ರಾಥರ್ ಅವರಿಗೆ ಸೇರಿದ ಲಾಕರ್‌ನಿಂದ ಎಕೆ-47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.
ಫರಿದಾಬಾದ್‌ನಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಲು ಮತ್ತು ಅಡಗಿಸಿಡಲು ಸಹಾಯ ಮಾಡಿದ ಆರೋಪದ ಮೇಲೆ ಪುಲ್ವಾಮಾ ಜಿಲ್ಲೆಯ ಕೊಯಿಲ್ ನಿವಾಸಿ ಡಾ. ಮುಜಾಮಿಲ್ ಶಕೀಲ್ ಎಂಬ ಮತ್ತೊಬ್ಬ ವೈದ್ಯನನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.