ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಸಂಸದ ಧೀರಜ್ ಸಾಹು ಹಾಜರು

ಪಿಟಿಐ
Published 10 ಫೆಬ್ರುವರಿ 2024, 7:39 IST
Last Updated 10 ಫೆಬ್ರುವರಿ 2024, 7:39 IST
   

‌ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಅವರು ಶನಿವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .

ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಹು ತೆರಳಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪ್ರಶ್ನಿಸಲು ಮತ್ತು ಹೇಳಿಕೆಯನ್ನು ದಾಖಲಿಸಲು ಇ.ಡಿ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.