ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳಾ ಸಾಕ್ಷರತಾ ಪ್ರಮಾಣ ದೇಶದ ಸರಾಸರಿಗಿಂತ ಕಡಿಮೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 11:29 IST
Last Updated 19 ಸೆಪ್ಟೆಂಬರ್ 2020, 11:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಈಚಿನ ವರ್ಷಗಳಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾಗಿದ್ದು, ಈಗ ಶೇ 77.30ರಷ್ಟಿದೆ. ಮಹಿಳಾ ಸಾಕ್ಷರತಾ ಪ್ರಮಾಣ ಶೇ 68ರಷ್ಟಿದ್ದು, ಇದು ಅಖಿಲ ಭಾರತ ಮಟ್ಟದ ಪ್ರಮಾಣಕ್ಕಿಂತಲೂ (ಶೇ 70.30) ಕಡಿಮೆಯಾಗಿದೆ.

ಅಖಿಲ ಭಾರತ ಮಟ್ಟದಲ್ಲಿ ಪುರುಷರ ಸಾಕ್ಷರತಾ ಪ್ರಮಾಣ ಶೆ 84.70ರಷ್ಟಿದ್ದು, ಮಹಿಳಾ ಸಾಕ್ಷರತೆ ಪ್ರಮಾಣ ಶೇ 70.30ಕ್ಕಿಂತಲೂ ಹೆಚ್ಚಾಗಿದೆ. ಜೊತೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರು ಶಿಕ್ಷಣ ಪಡೆಯುವ ಅವಕಾಶಗಳಲ್ಲಿಯೂ ಸಾಕಷ್ಟು ಅಂತರವಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಅಂಕಿ ಅಂಶಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪುರುಷರ ಸಾಕ್ಷರತಾ ಪ್ರಮಾಣ ಶೇ 85.70ರಷ್ಟಿದ್ದರೆ, ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ 68ರಷ್ಟಿದೆ. ಮಹಿಳೆಯರ ಸಾಕ್ಷರತಾ ಪ್ರಮಾಣ ನಗರ ಪ್ರದೇಶದಲ್ಲಿ ಶೇ 75.7ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಶೇ 66ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.