ಜೆಎಂಎಂ ಸಂಸದೆ ಮಹುವಾ ಮಜಿ
-ಪಿಟಿಐ ಚಿತ್ರ
ರಾಂಚಿ: ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ವೇಳೆ ಜಾರ್ಖಂಡ್‌ನ ಲತೇಹರ್ ಜಿಲ್ಲೆಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಜೆಎಂಎಂ ಸಂಸದೆ ಮಹುವಾ ಮಜಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 2.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಹೊಟ್ವಾಗ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಮಜಿ ಅವರ ಎಡಗೈ ಮೂಳೆ ಮುರಿದಿದ್ದು, ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕಾರಿನಲ್ಲಿದ್ದ ಮಜಿ ಅವರ ಮಗ ಮತ್ತು ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತಕ್ಕೀಡಾದ ಕೂಡಲೇ ಮಜಿ ಅವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಅವರನ್ನು ರಾಂಚಿಯ ರೀಮ್ಸ್‌ಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿ ದುಲಾರ್ ಚೌಡೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.