ಹೇಮಂತ್ ಸೊರೇನ್
ರಾಂಚಿ: ‘ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ’ ಎಂದು ತಿಳಿಸಿದೆ.
ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ನವೆಂಬರ್ 6 ಹಾಗೂ 11ರಂದು ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
‘ಜೆಎಂಎಂ ಪಕ್ಷವು ಛಕಯಿ, ಧಮ್‌ದಾಹ, ಕಟೋರಿಯಾ, ಮಣಿಹರಿ (ಎಸ್.ಟಿ ಮೀಸಲು ಕ್ಷೇತ್ರ) ಜಮುಯಿ ಹಾಗೂ ಪೀರ್‌ಪೈಂತಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರ ಸುಪ್ರಿಯೊ ಭಟ್ಟಾಚಾರ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.