ADVERTISEMENT

ಜೆಎನ್‌ಯು: ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ, ಸಂಸತ್‌ಗೆ ಮುತ್ತಿಗೆ ಹಾಕಲು ಯತ್ನ

ಏಜೆನ್ಸೀಸ್
Published 18 ನವೆಂಬರ್ 2019, 10:59 IST
Last Updated 18 ನವೆಂಬರ್ 2019, 10:59 IST
ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ಜೆಎನ್‌ಯು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆದರು
ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ಜೆಎನ್‌ಯು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆದರು   

ನವದೆಹಲಿ:ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ದೆಹಲಿಯಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಸೋಮವಾರ ತಾರಕಕ್ಕೇರಿದೆ. ಸಂಸತ್‌ ಭವನಕ್ಕೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದಾರೆ.

ವಿಶ್ವವಿದ್ಯಾಲಯ ಆವರಣ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಸಂಸತ್ ಭವನದ ಸಮೀಪದಲ್ಲಿರುವ ಮೂರು ಮೆಟ್ರೊ ರೈಲು ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಪೊಲೀಸರ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಫ್ದರ್‌ಜಂಗ್ ಬಳಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷಐಶಿ ಘೋಷ್ ಸೇರಿದಂತೆ ಪ್ರತಿಭಟನಾನಿರತ 50 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ತೆಗದುಕೊಂಡಿದ್ದಾರೆ.

ADVERTISEMENT

ಹಾಸ್ಟೆಲ್ ಶುಲ್ಕ ಏರಿಕೆಗೆ, ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆ ಜಾರಿಗೆ, ಕ್ಯಾಂಪಸ್‌ನಲ್ಲಿ ಪ್ರತಿಭಟನೆಗೆ ತಡೆ ನೀಡಲು ಮತ್ತು ಕರ್ಪ್ಯೂ ಸಮಯ ನಿಗದಿಗೆ ಅವಕಾಶ ನೀಡುವ ಹಾಸ್ಟೆಲ್‌ ಕರಡು ಕೈಪಿಡಿಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಕಳೆದ ವಾರವೂ ಭಾರಿ ಪ್ರತಿಭಟನೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.