ADVERTISEMENT

BBC ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಸಜ್ಜು

ಪಿಟಿಐ
Published 23 ಜನವರಿ 2023, 16:54 IST
Last Updated 23 ಜನವರಿ 2023, 16:54 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಹೆಸರಿನ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ತನ್ನ ಕಚೇರಿಯಲ್ಲಿ ಪ್ರದರ್ಶಿಸುವುದಾಗಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು (ಜೆಎನ್‌ಯುಎಸ್‌ಯು) ತಿಳಿಸಿದೆ. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿದೆ.

‘ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿದ್ಯಾರ್ಥಿ ಸಂಘಟನೆಯು ತನ್ನ ಅನುಮತಿ ಪಡೆದಿಲ್ಲ. ಸಂಘಟನೆಯ ಈ ಬಗೆಯ ಅನಧಿಕೃತ ಚಟುವಟಿಕೆಗಳಿಂದ ವಿಶ್ವವಿದ್ಯಾಲಯದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಪ್ರದರ್ಶನ ರದ್ದುಪಡಿಸಬೇಕು’ ಎಂದು ವಿಶ್ವವಿದ್ಯಾಲಯದ ಆಡಳಿತವು ವಿದ್ಯಾರ್ಥಿ ಸಂಘಟನೆಗೆ ಸೂಚಿಸಿದೆ.

‘ಸಾಕ್ಷ್ಯಚಿತ್ರ ಪ್ರದರ್ಶಿಸುವ ಸಂಬಂಧ ಸಿದ್ಧಪಡಿಸಿರುವ ಭಿತ್ತಿಪತ್ರಗಳನ್ನು ಕೆಲ ವಿದ್ಯಾರ್ಥಿಗಳು ಹಂಚುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ವಿಶ್ವವಿದ್ಯಾಲಯದ ನಿಯಮಗಳ ಅನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ’ ಎಂದೂ ಎಚ್ಚರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.