ADVERTISEMENT

ಸರ್ಕಾರದ ಕೆಲಸ ಭಯೋತ್ಪಾದಕರ ರೀತಿ ಅಲ್ಲ: ದೆಹಲಿ ನ್ಯಾಯಾಲಯ

ಪಿಟಿಐ
Published 11 ಮೇ 2021, 21:41 IST
Last Updated 11 ಮೇ 2021, 21:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಸರ್ಕಾರದ ಕೆಲಸ ಭಯೋತ್ಪಾದಕರ ರೀತಿ ಅಲ್ಲ. ನಿಮ್ಮ ವೈಫಲ್ಯಗಳನ್ನು ಮರೆಮಾಚಿಕೊಳ್ಳಿ, ಆದರೆ ಜನರ ಬಳಿಕ ನೀವು ಇದ್ದೀರಿ ಎಂಬುದನ್ನು ತಿಳಿದುಕೊಳ್ಳಿ’ ಎಂದು ದೆಹಲಿಯ ನ್ಯಾಯಾಲಯ ಮಂಗಳವಾರ ಹೇಳಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ವೈದ್ಯಕೀಯ ಉಪಕರಣಗಳ ಬೆಲೆಯನ್ನು ಸರ್ಕಾರ ನಿಯಂತ್ರಿಸಿಲ್ಲ ಎಂದು ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದೆ.

ಆಮ್ಲಜನಕ ಸಾಂದ್ರೀಕರಣ ಸಾಧನಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ‘ಇಂತಹ ವ್ಯಾಪಾರ ಮಾಡುವುದು ಈ ದೇಶದಲ್ಲಿ ಅಪರಾಧ’ ಎಂದು ಹೇಳಿದೆ.

ADVERTISEMENT

ಮ್ಯಾಟ್ರಿಕ್ಸ್‌ ಸೆಲ್ಯುಲರ್‌ ಸರ್ವೀಸಸ್‌ ಕಂಪನಿಯ ಸಿಇಒ, ಉಪಾಧ್ಯಕ್ಷ ಸೇರಿದಂತೆ ನೌಕರರ ಜಾಮೀನು ಅರ್ಜಿ ವಿಚಾರಣೆ ವೇಳೆ ಮುಖ್ಯ ಮೆಟ್ರೊಪಾಲಿಟನ್‌ ನ್ಯಾಯಾಧೀಶರಾದ ಅರುಣ್‌ ಕುಮಾರ್‌ ಗರ್ಗ್‌ ಮೌಖಿಕವಾಗಿ ಈ ವಿಚಾರಗಳನ್ನು ಹೇಳಿದ್ದಾರೆ.

ವೈದ್ಯಕೀಯ ಉಪಕರಣಗಳನ್ನು ಸಂಗ್ರಹಿಸಿಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡಿದ ಆರೋಪದಲ್ಲಿ ಇವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.