ADVERTISEMENT

ಜೋಧಪುರ ಕೋಮು ಹಿಂಸಾಚಾರ: 140 ಮಂದಿ ಬಂಧನ, ಮೇ 6ರ ವರೆಗೂ ಕರ್ಫ್ಯೂ ಮುಂದುವರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಮೇ 2022, 5:30 IST
Last Updated 5 ಮೇ 2022, 5:30 IST
ಜೋಧಪುರದ ಜಾಲೋರಿ ಗೇಟ್‌ ಬಳಿ ನಡೆದ ಕೋಮು ಘರ್ಷಣೆಯನ್ನು ನಿಯಂತ್ರಿಸುತ್ತಿರುವ ಪೊಲೀಸರು
ಜೋಧಪುರದ ಜಾಲೋರಿ ಗೇಟ್‌ ಬಳಿ ನಡೆದ ಕೋಮು ಘರ್ಷಣೆಯನ್ನು ನಿಯಂತ್ರಿಸುತ್ತಿರುವ ಪೊಲೀಸರು   

ಜೋಧಪುರ: ರಾಜಸ್ಥಾನದ ಜೋಧಪುರದಲ್ಲಿ ಮಂಗಳವಾರ ಸಂಭವಿಸಿದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಈ ವರೆಗೆ 140 ಜನರನ್ನು ಬಂಧಿಸಲಾಗಿದೆ.

ಮೇ 3 ರಂದು ಜೋಧಪುರ ಕಮಿಷನರೇಟ್ ಪ್ರದೇಶದಲ್ಲಿ ವಿಧಿಸಲಾಗಿದ್ದ ಕರ್ಫ್ಯೂ ಅನ್ನು ಮೇ 6 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ, ವೈದ್ಯಕೀಯ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿ, ಬ್ಯಾಂಕ್ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ತಮ್ಮ ಕೆಲಸಗಳನ್ನು ನಿರ್ವಹಿಸಬಹುದಾಗಿದೆ.

ADVERTISEMENT

ಈದ್ ಸಂದರ್ಭದಲ್ಲಿ ಧಾರ್ಮಿಕ ಧ್ವಜ ಅಳವಡಿಸುವ ವಿಚಾರದಲ್ಲಿ ಜಾಲೋರಿ ಗೇಟ್‌ ಸಮೀಪ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದ್ದು, ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿದ್ದವು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.