ADVERTISEMENT

ವರ್ಷಾಂತ್ಯಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ ಏಕ ಡೋಸ್ ಲಸಿಕೆ ಭಾರತಕ್ಕೆ: ವರದಿ

ಡೆಕ್ಕನ್ ಹೆರಾಲ್ಡ್
Published 14 ಆಗಸ್ಟ್ 2021, 8:24 IST
Last Updated 14 ಆಗಸ್ಟ್ 2021, 8:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಈ ವರ್ಷಾಂತ್ಯದ ವೇಳೆಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಕೋವಿಡ್ ಲಸಿಕೆ ಭಾರತಕ್ಕೆ ಪೂರೈಕೆಯಾಗಲಿದೆ ಎನ್ನಲಾಗಿದೆ.

ಈ ವಿಚಾರವಾಗಿ ಸರ್ಕಾರಿ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ‘ನ್ಯೂಸ್ 18’ ವರದಿ ಮಾಡಿದೆ.

ಕಳೆದ ವಾರವಷ್ಟೇ ಜಾನ್ಸನ್ ಆ್ಯಂಡ್ ಜಾನ್ಸನ್ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.

ADVERTISEMENT

ಜಾನ್ಸನ್ ಲಸಿಕೆಗೆ ಅನುಮತಿ ನೀಡುವುದರೊಂದಿಗೆ ಭಾರತದಲ್ಲಿ ಐದು ಕೋವಿಡ್ ಲಸಿಕೆಗಳ ಬಳಕೆಗೆ ಅನುಮೋದನೆ ಸಿಕ್ಕಂತಾಗಿದೆ ಎಂದು ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಕಳೆದ ವಾರ ಹೇಳಿದ್ದರು.

ಪ್ರಸ್ತುತ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್, ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್, ರಷ್ಯಾದ ಸ್ಪುಟ್ನಿಕ್ ವಿ, ಮೊಡೆರ್ನಾ ಮತ್ತು ಜಾನ್ಸನ್ ಆ್ಯಂಡ್ ಜಾನ್ಸನ್‌ನ ಏಕ ಡೋಸ್‌ ಲಸಿಕೆ ಬಳಕೆಗೆ ದೇಶದಲ್ಲಿ ಅನುಮತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.