ADVERTISEMENT

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 9:40 IST
Last Updated 7 ಆಗಸ್ಟ್ 2021, 9:40 IST
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್‌ ಲಸಿಕೆ
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್‌ ಲಸಿಕೆ   

ನವದೆಹಲಿ: ‘ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಏಕ ಡೋಸ್‌ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರು ಶನಿವಾರ ತಿಳಿಸಿದ್ದಾರೆ.

‘ಭಾರತವು ತನ್ನ ಲಸಿಕಾ ಬುಟ್ಟಿಯನ್ನು ಇನ್ನಷ್ಟು ವಿಸ್ತರಿಸಿದೆ. ಭಾರತದಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಒಂದು ಡೋಸ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಪ್ರಸ್ತುತ ದೇಶದಲ್ಲಿ ಐದು ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಇದು ಕೊರೊನಾ ವಿರುದ್ಧದ ದೇಶದ ಹೋರಾಟಕ್ಕೆ ಇನ್ನಷ್ಟು ಬಲ ನೀಡಲಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಅಮೆರಿಕ ಮೂಲದಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ತನ್ನ ಏಕ ಡೋಸ್‌ ಲಸಿಕೆಯ ತುರ್ತು ಬಳಕೆಗೆ ಶುಕ್ರವಾರ ಅನುಮತಿ ಕೋರಿತ್ತು. ಅದೇ ದಿನ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರವು (ಡಿಸಿಜಿಐ) ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ADVERTISEMENT

ಭಾರತದಲ್ಲಿ ಕೋವಿಶೀಲ್ಡ್‌, ಕೋವ್ಯಾಕ್ಸಿನ್, ಸ್ಪುಟ್ನಿಕ್ ವಿ, ಮೊಡೆರ್ನಾ ಮತ್ತು ಹೊಸದಾಗಿ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.