ಸೀತಾಪುರ: ಶನಿವಾರ ಉತ್ತರ ಪ್ರದೇಶದ ಸೀತಾಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದಿ ದಿನಪತ್ರಿಕೆಯ ಪ್ರಾದೇಶಿಕ ವರದಿಗಾರರೊಬ್ಬರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಮಾಲಿಯಾ ಸುಲ್ತಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಂಪುರ್ ರೈಲ್ವೆ ಕ್ರಾಸಿಂಗ್ ಬಳಿಯ ಮೇಲ್ಸೇತುವೆಯ ಮೇಲೆ ಈ ದಾಳಿ ನಡೆದಿದೆ.
ಪೊಲೀಸರ ಪ್ರಕಾರ, ರಾಘವೇಂದ್ರ ಬಜ್‌ಪೈ (35) ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ.
'ಮೂರು ಗುಂಡುಗಳು ಅವರ ಭುಜ ಮತ್ತು ಎದೆಗೆ ಹೊಕ್ಕಿವೆ. ನಂತರ ದಾಳಿಕೋರರು ತಮ್ಮ ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಸೀತಾಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.
ಸ್ಥಳೀಯ ನಿವಾಸಿಗಳ ಸಹಾಯದಿಂದ, ಪೊಲೀಸರು ಬಜ್‌ಪೈ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ವೈದ್ಯರು ಘೋಷಿಸಿದ್ದಾರೆ.
ಇತ್ತೀಚೆಗೆ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು ಎಂದು ಮಾಧ್ಯಮಗಳಿಗೆ ಕುಟುಂಬವು ತಿಳಿಸಿದೆ.
‘ಪುರಾವೆಗಳ ಸಂಗ್ರಹ ಆರಂಭವಾಗಿದೆ. ದುಷ್ಕರ್ಮಿಗಳನ್ನು ಬಂಧಿಸಲು ಜಿಲ್ಲಾ ಗಡಿಗಳನ್ನು ಮುಚ್ಚಲಾಗಿದೆ. ಕರೆ ವಿವರಗಳು ಮತ್ತು ಇತರ ಕಾನೂನು ಕ್ರಮಗಳು ನಡೆಯುತ್ತಿವೆ’ಎಂದು ಎಎಸ್‌ಪಿ ಸಿಂಗ್ ಹೇಳಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.